alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಆಪ್ತ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಸಿದ್ದರಾಮಯ್ಯ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿಗೆ ಮರಳಿ ಬರುತ್ತಿದ್ದು, ಇದರ ಮಧ್ಯೆ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕ ಎಂ.ಬಿ. ಪಾಟೀಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಬಹಿರಂಗವಾಗಿದೆ.

ತಮ್ಮ ಭೇಟಿಗಾಗಿ ಬಂದಿದ್ದ ಶಾಸಕರುಗಳ ಬಳಿ ತಮ್ಮ ಅಸಮಾಧಾನ ತೋಡಿಕೊಂಡಿರುವ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆಯಲ್ಲಿ ಎಂ.ಬಿ. ಪಾಟೀಲ್ ನೀಡಿದ ಸಲಹೆಯಿಂದಲೇ ಸೋಲಾಯಿತು ಎಂದು ಹೇಳಿದ್ದಾರೆನ್ನಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಎಂ.ಬಿ. ಪಾಟೀಲರ ಮಾತು ಕೇಳಿದ ಪರಿಣಾಮ ಲಿಂಗಾಯತರ ಮತ ಕಳೆದುಕೊಳ್ಳುವಂತಾಯಿತು. ಜೊತೆಗೆ ದಲಿತ ಎಡಗೈ ಸಮುದಾಯದವರೂ ಚುನಾವಣೆಯಲ್ಲಿ ನಮ್ಮ ಕೈ ಹಿಡಿಯಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...