alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪೋಟಕ ರಹಸ್ಯ ಬಿಚ್ಚಿಟ್ಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಳೆ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹಿನ್ನಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಇದೊಂದು ಐತಿಹಾಸಿಕ ಆದೇಶ ಎಂದು ಬಣ್ಣಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಕ್ಕೇರಲು ಹವಣಿಸುತ್ತಿದೆ. ಗೋವಾ, ಮಣಿಪುರ ಮೊದಲಾದ ಕಡೆ ಇದೇ ಕೆಲಸ ಮಾಡಿದ್ದ ಬಿಜೆಪಿ ಈಗ ಕರ್ನಾಟಕದಲ್ಲಿ ಮತ್ತೊಮ್ಮೆ ಅಂತಹ ಕಾರ್ಯಕ್ಕೆ ಮುಂದಾಗಿದ್ದು, ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನಿಂದ ಮುಖಭಂಗಕ್ಕೊಳಗಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪು ಐತಿಹಾಸಿಕವಾಗಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವಂತದ್ದಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದ ಬಿಜೆಪಿಯವರು ಈಗಲಾದರೂ ಪಾಠ ಕಲಿಯಲಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯ ಜನಾರ್ದನ ರೆಡ್ಡಿ, ಶ್ರೀರಾಮುಲು ಮೊದಲಾದವರು ಶಾಸಕರನ್ನು ಖರೀದಿಸಲು ಎಷ್ಟು ಹಣ ನೀಡಲು ಮುಂದಾಗಿದ್ದರು ಎಂಬ ದಾಖಲೆಯಿದ್ದು, ಇದನ್ನು ಬಹಿರಂಗಪಡಿಸುತ್ತೇವೆ ಎನ್ನುವ ಮೂಲಕ ಸ್ಪೋಟಕ ಸತ್ಯವನ್ನು ಹೊರ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...