alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಾರ್ಪಾಡಿನೊಂದಿಗೆ ಕೆಪಿಎಂಇ ತಿದ್ದುಪಡಿ ಕಾಯ್ದೆ ಮಂಡನೆ’

ಬೆಳಗಾವಿ: ಕೆ.ಪಿ.ಎಂ.ಇ. ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೈದ್ಯರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಸಂಘದ ಪ್ರತಿನಿಧಿಗಳು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಿದ ಸಭೆ ಫಲಪ್ರದವಾಗಿದೆ.

ಸಭೆಯಲ್ಲಿ ವೈದ್ಯರ ಮನವೊಲಿಸಿದ್ದು, ಯಾವುದೇ ಭಯ, ಅನುಮಾನ ಆತಂಕ ಬೇಡವೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವೈದ್ಯರಿಗೆ ಭರವಸೆ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ವೈದ್ಯರಿಗೆ ಸಮಾಧಾನ ಆಗುವ ರೀತಿಯಲ್ಲಿ ಹಾಗೂ ಕಾಮನ್ ಮ್ಯಾನ್ ಗಳಿಗೂ ಒಳಿತಾಗುವ ರೀತಿಯಲ್ಲಿ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗ್ತಿದೆ ಎಂದು ಹೇಳಿದ್ದಾರೆ.

2007 ರ ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿದ್ದರಿಂದ ಕೆಲವರು ಬೆಂಕಿ ಬಿದ್ದ ಮನೆಯಲ್ಲಿ ಗಳ ಇರಿಯುವ ಪ್ರಯತ್ನ ಮಾಡಿದರು. ನಾವು ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಜನರಿಗೆ ಆರೋಗ್ಯ ಸೇವೆ ಒದಗಿಸುವ ಯೋಜನೆ ರೂಪಿಸಲಾಗಿದೆ. ರಾಜ್ಯದ ಜನರ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯರೊಂದಿಗೆ ಕಾಯ್ದೆ ಬದಲಾವಣೆ ಬಗ್ಗೆ ಚರ್ಚಿಸಲಾಗಿದೆ. ಜಿಲ್ಲಾ ದೂರು ಪ್ರಾಧಿಕಾರ ರಚನೆ ಕೈಬಿಡಲು ತೀರ್ಮಾನಿಸಲಾಗಿದೆ. ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ತೀರ್ಮಾನದಂತೆ ವಿಧೇಯಕದಲ್ಲಿ ಕೆಲವೊಂದು ಬದಲಾವಣೆ ಮಾಡಿ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಆರೋಗ್ಯ ಸಚಿವ ರಮೇಶ್ ಕುಮಾರ್, ರಾಜ್ಯದ ಜನಸಾಮಾನ್ಯರಿಗೆ ಆರೋಗ್ಯ ಸೌಲಭ್ಯ ಸುಲಭವಾಗಿ ಸಿಗಬೇಕೆಂಬ ದೃಷ್ಠಿಯಿಂದ ಕಾಯ್ದೆಗೆ ತಿದ್ದುಪಡಿ ಮಾಡಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ವೈದ್ಯರಿಗೆ ಇದ್ದ ಎಲ್ಲಾ ಗೊಂದಲವನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...