alex Certify
ಕನ್ನಡ ದುನಿಯಾ       Mobile App
       

Kannada Duniya

‘ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಪರಿಶೀಲನೆ’

cm-siddaramaiah

ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗದಲ್ಲಿ ಮೀಸಲು ಒದಗಿಸಲು ಮತ್ತು ಈಗಿರುವ ಮೀಸಲು ಪ್ರಮಾಣ ಶೇ.50 ಕ್ಕಿಂತ ಹೆಚ್ಚಿಸಲು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಅವರು, ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಪರಿಶಿಷ್ಟರ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನ ಸದ್ಬಳಕೆ ಆಗಬೇಕಾದರೆ ತಾಲೂಕು ಮಟ್ಟದಲ್ಲಿ ಕಚೇರಿ ಮತ್ತು ಅಧಿಕಾರಿಗಳು ಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು. ವಾಲ್ಮೀಕಿ ಸಮುದಾಯದ ಮಠ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ 5 ಕೋಟಿ ರೂ. ನೀಡಲಾಗುವುದು ಎಂದೂ ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಘೋಷಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...