alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಧನಾ ಸಮಾವೇಶ ಕೈಗೊಂಡ ಸಿ.ಎಂ.ಗೆ ಸಂಕಷ್ಟ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪ್ರತಿವಾದಿಯಾಗಿಸಿ, ಹೈಕೋರ್ಟ್ ಗೆ ಪಿ.ಐ.ಎಲ್. ಸಲ್ಲಿಸಲಾಗಿದೆ.

ಮುಖ್ಯಮಂತ್ರಿಯವರು ಸಾರ್ವಜನಿಕರ ತೆರಿಗೆ ಹಣ ಬಳಸಿ ಸಮಾವೇಶದಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ದೂರಲಾಗಿದೆ.

ಸಿ.ಎಂ. ಸಮಾವೇಶದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ. ರಾಜಕೀಯ ಹಿತಾಸಕ್ತಿಯ ಕಾರ್ಯಕ್ರಮ ನಡೆಸುತ್ತಿರುವುದರಿಂದ ಅವರಿಂದ ಹಣ ವಸೂಲಿ ಮಾಡಬೇಕೆಂದು ಬೆಂಗಳೂರಿನ ಕೀರ್ತಿವರ್ಧನ್ ಜೋಶಿ ಅವರು ಪಿ.ಐ.ಎಲ್. ಸಲ್ಲಿಸಿದ್ದಾರೆ.

ಸಿ.ಎಂ. ಸಮಾವೇಶದಲ್ಲಿ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾತ್ರ ಪ್ರಚಾರ ಮಾಡದೇ, ರಾಜಕೀಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ ಎಂದು ದೂರಿದ್ದಾರೆ.

ರಾಜಕೀಯ ಸಮಾವೇಶಕ್ಕೆ ಸರ್ಕಾರದ ಹಣ ಬಳಕೆಗೆ ನಿರ್ಬಂಧ ಹೇರಬೇಕು. ಈ ಬಗ್ಗೆ ಕ್ರಮಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...