alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಯೂಟ ನೌಕರರಿಗೆ ‘ಸಿಹಿ’ ಸುದ್ದಿ ನೀಡಿದ ಸಿ.ಎಂ.

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ನಡೆಸುತ್ತಿದ್ದ ಹೋರಾಟವನ್ನು ಬಿಸಿಯೂಟ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.

ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್, ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು.

ನಿರಂತರ ಹೋರಾಟದ ಬಳಿಕ ಸಿ.ಎಂ. ಸ್ಪಂದಿಸಿ ಸಭೆ ನಡೆಸಿದ್ದಾರೆ. ಬಜೆಟ್ ನಲ್ಲಿ ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ಸಂಘದ ಪ್ರತಿನಿಧಿಗಳು ಹಾಗೂ ಸಚಿವ ತನ್ವೀರ್ ಸೇಠ್ ಅವರೊಂದಿಗೆ ಸಭೆ ನಡೆಸಿದ ಸಿ.ಎಂ., ಬಿಸಿಯೂಟ ನೌಕರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತಾಗಿ ಚರ್ಚೆ ನಡೆಸಿದ್ದು, ಪರಿಶೀಲನೆ ನಡೆಸಿ ಬಜೆಟ್ ನಲ್ಲಿ ಭರವಸೆ ಈಡೇರಿಸುವುದಾಗಿ ತಿಳಿಸಿದ್ದಾರೆ. ಬಳಿಕ ಹೋರಾಟ ಸ್ಥಗಿತಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...