alex Certify
ಕನ್ನಡ ದುನಿಯಾ       Mobile App
       

Kannada Duniya

ಸತೀಶ್ ಜಾರಕಿಹೊಳಿ ಮನವೊಲಿಸಿದ ಸಿಎಂ

siddaramaiahಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುತೇಕ ಯಶಸ್ವಿಯಾಗಿದ್ದಾರೆಂದು ಹೇಳಲಾಗಿದೆ. ಕಳೆದ ರಾತ್ರಿ ತಮ್ಮ ನಿವಾಸಕ್ಕೆ ಸತೀಶ್ ಜಾರಕಿಹೊಳಿಯವರನ್ನು ಕರೆಸಿಕೊಂಡಿದ್ದ ಸಿದ್ದರಾಮಯ್ಯ, ಅಸಮಾಧಾನ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದರೆಂದು ತಿಳಿದುಬಂದಿದೆ.

ಮಾತುಕತೆ ವೇಳೆ ಸತೀಶ್ ಜಾರಕಿಗೊಳಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಕುರಿತು ಸಿದ್ದರಾಮಯ್ಯನವರ ಅವಗಾಹನೆಗೆ ತಂದರೆಂದು ಹೇಳಲಾಗಿದ್ದು, ಶೀಘ್ರದಲ್ಲೇ ಬೆಳಗಾವಿ ಕಾಂಗ್ರೆಸ್ ಮುಖಂಡರನ್ನು ಕರೆಸಿ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರೆನ್ನಲಾಗಿದೆ.

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರ ಪ್ರಭಾವ ಮತ್ತಷ್ಟು ಹೆಚ್ಚಾಗಿದ್ದು, ಹೀಗಾಗಿ 2018 ರ ವಿಧಾನಸಭಾ ಚುನಾವಣೆಯನ್ನು ತಮ್ಮ ನೇತೃತ್ವದಲ್ಲೇ ಎದುರಿಸಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಬಯಕೆ ಹೊಂದಿರುವ ಸಿದ್ದರಾಮಯ್ಯನವರು ಪಕ್ಷದಲ್ಲಿ ತಮಗೆ ತಿರುಗಿ ಬಿದ್ದವರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಹಿಂದೆ ಸಿ.ಎಂ. ಇಬ್ರಾಹಿಂ ಮನೆಗೆ ತೆರಳಿ ಮಾತುಕತೆ ನಡೆಸಿದ್ದ ಸಿದ್ದರಾಮಯ್ಯನವರು ಕಳೆದ ವಾರ ಅಂಬರೀಷ್ ಅವರ ನಿವಾಸಕ್ಕೂ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...