alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ಪುತ್ರನ ಕಾರು ಜಪ್ತಿ

siddaramaiahಏಪ್ರಿಲ್ 9 ರಂದು ನಡೆಯಲಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಉಪ ಚುನಾವಣೆಯ ಕಾವು, ಬಿರು ಬೇಸಿಗೆಯ ಜೊತೆ ಏರತೊಡಗಿದ್ದು, ಕಾಂಗ್ರೆಸ್-ಬಿಜೆಪಿಯ ಘಟಾನುಘಟಿ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬೆವರು ಹರಿಸುತ್ತಿದ್ದಾರೆ.

ಚುನಾವಣಾ ಅಕ್ರಮ ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪ್ರಚಾರಕ್ಕಾಗಮಿಸುತ್ತಿರುವ ಪ್ರಮುಖ ನಾಯಕರ ಕಾರುಗಳನ್ನೂ ಸಹ ಬಿಡದೆ ತಪಾಸಣೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ವಿಧಾನಪರಿಷತ್ ಸದಸ್ಯ ವಿ. ಸೋಮಣ್ಣರ ಕಾರನ್ನು ಇಂದು ತಪಾಸಣೆ ನಡೆಸಲಾಗಿದೆ.

ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಪ್ರಯಾಣಿಸುತ್ತಿದ್ದ ಕಾರನ್ನು ಗುಂಡ್ಲುಪೇಟೆಯಲ್ಲಿ ಜಪ್ತಿ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕಾರಿಗೆ ಅನುಮತಿ ಪಡೆಯದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿದ್ದು, ಬಳಿಕ ಡಾ. ಯತೀಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಅವರ ಕಾರಿನಲ್ಲಿ ತೆರಳಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...