alex Certify
ಕನ್ನಡ ದುನಿಯಾ       Mobile App
       

Kannada Duniya

‘ಟಿಕೆಟ್ ನೀಡಿದರೆ ವರುಣಾ ಕ್ಷೇತ್ರದಿಂದ ಸ್ಪರ್ಧೆ’

ಮಂಡ್ಯ: ‘ಮುಖ್ಯಮಂತ್ರಿಯವರ ಪ್ರತಿನಿಧಿಯಾಗಿ ವರುಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕ್ಷೇತ್ರದ ಜನರ ಒತ್ತಡವಿದ್ದು, ಅವಕಾಶ ಸಿಕ್ಕರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’

ಹೀಗೆಂದು ಹೇಳಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ. ಯತೀಂದ್ರ. ಮಂಡ್ಯ ಸಮೀಪದ  ಕರಡಿಕೊಪ್ಪಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ ಸಿದ್ಧರಾಮಯ್ಯನವರು ರಾಜಕೀಯ ಆರಂಭಿಸಿದ ಮತ್ತು ರಾಜಕೀಯ ಪುನರ್ಜನ್ಮ ಪಡೆದ ಕ್ಷೇತ್ರವಾಗಿದೆ. ಅವರು ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಸಿದ್ಧರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಅಂತಿಮ ತೀರ್ಮಾನವಾಗಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಟಿಕೆಟ್ ಸಿಕ್ಕರೆ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...