alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ನಾಯಕರ ಲೆಕ್ಕಾಚಾರ ತಲೆಕೆಳಗು ಮಾಡಿದ ಕಾಂಗ್ರೆಸ್ ಹೈಕಮಾಂಡ್

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಿದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಲು ಕಾಂಗ್ರೆಸ್ ವಿಫಲವಾದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಕ್ಷದ ಹೈಕಮಾಂಡ್ ಕಡೆಗಣಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ನ ಕೆಲ ನಾಯಕರು ಲೆಕ್ಕಾಚಾರ ಹಾಕಿದ್ದರು.

ಆದರೆ ಸಿದ್ದರಾಮಯ್ಯನವರ ಸಾಮರ್ಥ್ಯ ಬಲ್ಲ ಕಾಂಗ್ರೆಸ್ ಹೈಕಮಾಂಡ್, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ರಚಿಸಲಾಗಿರುವ ಸಮನ್ವಯ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಿತ್ತು.

ಇದೀಗ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಮತ್ತೊಂದು ಮಹತ್ತರ ಸ್ಥಾನ ನೀಡಿದೆ. ಕಾಂಗ್ರೆಸ್ ನ ಅತ್ಯುನ್ನತ ನೀತಿ ನಿರೂಪಣಾ ವೇದಿಕೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ಸೇರ್ಪಡೆಗೊಂಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯನವರಿಗೆ ಕಾರ್ಯಕಾರಿ ಸಮಿತಿ ಸದಸ್ಯತ್ವ ನೀಡಲಾಗಿದೆ ಎನ್ನಲಾಗಿದ್ದು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ 23 ಸದಸ್ಯರಿರುವ ಈ ಸಮಿತಿಯಲ್ಲಿ ಸಿದ್ದರಾಮಯ್ಯನವರ ಹೆಸರು 12 ನೇ ಸ್ಥಾನದಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...