alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕಾಂಗ ಸಭೆಯಲ್ಲಿ ಕಣ್ಣೀರಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಐದು ವರ್ಷಗಳ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ಸರ್ಕಾರ ರಚನೆಯಾಗುವವರೆಗೂ ಸ್ಥಾನದಲ್ಲಿ ಮುಂದುವರೆಯುವಂತೆ ರಾಜ್ಯಪಾಲರು ಸೂಚಿಸಿರುವ ಹಿನ್ನಲೆಯಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ.

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವೇಳೆ ಭಾವುಕರಾದ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆಂದು ಹೇಳಲಾಗಿದ್ದು, ಅವರ ಆಪ್ತ ಶಾಸಕರ ಕಣ್ಣಂಚು ಕೂಡಾ ಈ ಸಂದರ್ಭದಲ್ಲಿ ತೇವಗೊಂಡಿವೆ.

ಈ ಬಾರಿಯೂ ಕಾಂಗ್ರೆಸ್ ಬಹುಮತ ಗಳಿಸುವ ವಿಶ್ವಾಸ ಹೊಂದಿದ್ದ ಸಿದ್ದರಾಮಯ್ಯ, ತಾವು ಮತ್ತೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ಫಲಿತಾಂಶ ವ್ಯತಿರಿಕ್ತವಾಗಿದ್ದು, ಕಾಂಗ್ರೆಸ್ ಕೇವಲ 78 ಸ್ಥಾನ ಗಳಿಸಲು ಸಾಧ್ಯವಾಯಿತಲ್ಲದೇ ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ಸೋಲನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...