alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಯಾರಿಗೆ ಸಿಗುತ್ತೆ ಸಿಹಿ…?

ಕರ್ನಾಟಕ ವಿಧಾನಸಭೆಯ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆಗೆ ಸಿದ್ದರಾಗಿದ್ದಾರೆ. ಬಜೆಟ್ ಕುರಿತು ಜನಸಾಮಾನ್ಯರಲ್ಲಿ ಕುತೂಹಲ ಮನೆ ಮಾಡಿದ್ದು, ಹಲವು ಜನಪ್ರಿಯ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ.

ದಾಖಲೆಯ 16 ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡುತ್ತಾರೆಂಬ ಬಹು ನಿರೀಕ್ಷೆಯಿದ್ದು, ಇದಕ್ಕೆ ಉತ್ತರ ಬಜೆಟ್ ಮಂಡನೆಯಲ್ಲಿ ಸಿಗಲಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಈ ವರ್ಗಕ್ಕೆ ವಿಶೇಷ ಆದ್ಯತೆ ನೀಡಬಹುದೆಂದು ಹೇಳಲಾಗುತ್ತಿದೆ.

ಬಜೆಟ್ ಪೂರಕ ಪ್ರಕ್ರಿಯೆಗಳು ಈಗಾಗಲೇ ಪೂರ್ಣಗೊಂಡಿದ್ದು, ನೀರಾವರಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ. ಜೊತೆಗೆ ನಗರ ಪ್ರದೇಶಗಳ ಮತದಾರರನ್ನು ಸೆಳೆಯಲು ಕೆಲವೊಂದು ಯೋಜನೆ ಘೋಷಿಸುವ ಸಾಧ್ಯತೆಯಿದೆ. ಅಲ್ಲದೇ ಬೆಂಗಳೂರು ನಗರಾಭಿವೃದ್ದಿಗೆ ಆದ್ಯತೆ ನೀಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...