alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಮಂಡಲದ ಉಭಯ ಸದನ ನಾಯಕರ ಸಭೆ ಕರೆದ ಸಿಎಂ

siddaramaiah_994833ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ತೀವ್ರ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 27ರಂದು ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆ ಕರೆದಿದ್ದಾರೆ.

ಬೆಳಗ್ಗೆ 11.30 ಕ್ಕೆ ನಡೆಯುವ ಸಭೆಯಲ್ಲಿ ವಿಧಾನ ಮಂಡಲದ ಉಭಯ ಸದನ ನಾಯಕರು, ಕೇಂದ್ರದ ಸಚಿವರು, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ.

9 ಲಕ್ಷ ಎಕರೆ ಸಾಂಬಾ ಬೆಳೆಗೆ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಒತ್ತಾಯಿಸುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗದೆ ಸಂಕಷ್ಟ ಉಂಟಾಗಿದೆ. ಜೊತೆಗೆ ಆ ಭಾಗದ ರೈತರೂ ತೊಂದರೆಗೆ ಒಳಗಾಗಿದ್ದಾರೆ. ಈ ಎಲ್ಲದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...