alex Certify
ಕನ್ನಡ ದುನಿಯಾ       Mobile App
       

Kannada Duniya

ಸುತ್ತೂರು ಮಠಕ್ಕೆ ಪುತ್ರನೊಂದಿಗೆ ಸಿಎಂ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ತಮ್ಮ ಪುತ್ರ ಡಾ. ಯತೀಂದ್ರರ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಶೀರ್ವಾದ ಪಡೆದಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ತೆರಳಿದ ಸಿದ್ದರಾಮಯ್ಯನವರು ಈ ಸಂದರ್ಭದಲ್ಲಿ ರಾಹುಲ್ ರಾಜ್ಯ ಭೇಟಿ ವೇಳೆ ಅವರೊಂದಿಗೆ ಮಠಕ್ಕೆ ಭೇಟಿ ನೀಡಬೇಕೆಂದುಕೊಂಡಿದ್ದೆವು. ಆದರೆ ಅಂದು ತಾವು ಹೈದರಾಬಾದ್ ಗೆ ಹೋಗಿರುವುದಾಗಿ ತಿಳಿದುಬಂದ ಕಾರಣ ಭೇಟಿ ನೀಡಲಾಗಲಿಲ್ಲವೆಂದು ಸುತ್ತೂರು ಶ್ರೀಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯನವರ ಭೇಟಿ ವೇಳೆ ಸುತ್ತೂರು ಶ್ರೀಗಳು, ಇತ್ತೀಚೆಗೆ ಸಮಾರಂಭವೊಂದರಲ್ಲಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ ಸಿದ್ದರಾಮಯ್ಯವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳೊಂದಿಗೆ ಸಿದ್ದರಾಮಯ್ಯನವರು ಕೆಲಹೊತ್ತು ಗೌಪ್ಯ ಮಾತುಕತೆ ನಡೆಸಿದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...