alex Certify
ಕನ್ನಡ ದುನಿಯಾ       Mobile App
       

Kannada Duniya

ವಾಚ್ ಉಲ್ಟಾ ಕಟ್ಟಲು ಆರಂಭಿಸಿದ್ರಾ ಸಿಎಂ ಸಿದ್ದರಾಮಯ್ಯ..?

siddaramaiah watch

ಮುಖ್ಯಮಂತ್ರಿ ಸಿದ್ದರಾಮಯ್ಯ ದುಬಾರಿ ಬೆಲೆಯ ವಾಚ್ ಕಟ್ಟುತ್ತಿರುವ ವಿಚಾರ ಭಾರೀ ಸುದ್ದಿ ಮಾಡುತ್ತಿದ್ದು, ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪದೇ ಪದೇ ಪ್ರಸ್ತಾಪಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ವಾಚ್ ಉಲ್ಟಾ ಕಟ್ಟಲು ಶುರು ಮಾಡಿದ್ದರಾ ಎಂಬ ಅನುಮಾನ ಈಗ ಆರಂಭವಾಗಿದೆ.

ಮೈಸೂರಿನಲ್ಲಿ ಸಿದ್ದರಾಮಯ್ಯನವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದೃಶ್ಯ ಮಾಧ್ಯಮಗಳ ಕ್ಯಾಮರಾಗಳು ಅವರ ವಾಚ್ ನತ್ತಲೇ ನೆಟ್ಟಿದ್ದು, ಈ ಸಂದರ್ಭದಲ್ಲಿ ಬೆಲ್ಟ್ ಇರುವ ವಾಚ್ ಅನ್ನು ಸಿದ್ದರಾಮಯ್ಯನವರು ಉಲ್ಟಾ ಕಟ್ಟಿಕೊಂಡಿರುವುದು ಕಂಡು ಬಂದಿದೆ.

ಈ ಮಧ್ಯೆ ಇಂದು ಮತ್ತೊಂದು ಬಾಂಬ್ ಸಿಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯನವರ ಬಳಿ ಇನ್ನೂ 8-10 ದುಬಾರಿ ಬೆಲೆಯ ವಾಚ್ ಗಳಿವೆ ಎಂದು ಹೇಳಿದ್ದಾರೆ. ಜೊತೆಗೆ ಸಿದ್ದರಾಮಯ್ಯನವರ ಆಪ್ತ ಮಹಾದೇವಪ್ಪನವರಿಗೂ ಬೆಲೆ ಬಾಳುವ ಉಡುಗೊರೆ ಸಂದಾಯವಾಗಿದೆ ಎಂದು ತಿಳಿಸಿದ್ದು, ಶೀಘ್ರದಲ್ಲೇ ಈ ಎಲ್ಲದರ ಕುರಿತು ವಿವರ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...