alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಪರೇಷನ್ ಕಮಲ’ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಮೂಲಕ ‘ಆಪರೇಷನ್ ಕಮಲ’ಕ್ಕೆ ಮುಂದಾಗಿದೆ ಎಂಬ ಮಾತುಗಳು ಆ ಸಂದರ್ಭದಲ್ಲಿ ಕೇಳಿಬಂದಿದ್ದವು.

ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಲವೊಂದು ದಾಖಲೆಗಳನ್ನು ಬಿಡುಗಡೆ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಾಸಕರಿಗೆ ಬಿಜೆಪಿ ನೂರು ಕೋಟಿ ರೂಪಾಯಿ ಆಮಿಷ ಒಡ್ಡಿತ್ತು ಎಂದು ಆರೋಪಿಸಿದ್ದರು.

ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆತ್ಮಸಾಕ್ಷಿಗನುಗುಣವಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಶಾಸಕರಿಗೆ ಮನವಿ ಮಾಡಿದ್ದೇವು ಎಂದಿದ್ದರು.

ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷ ಒಡ್ಡಿರುವುದಕ್ಕೆ ದಾಖಲೆಗಳಿವೆ. ಇದನ್ನು ಕೆಲ ಶಾಸಕರು ರೆಕಾರ್ಡ್ ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಏನೇ ಆಮಿಷ ಒಡ್ಡಿದರು ಶಾಸಕರು ಬಲಿಯಾಗುವುದಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡುತ್ತದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...