alex Certify
ಕನ್ನಡ ದುನಿಯಾ       Mobile App
       

Kannada Duniya

ಬಕ್ರೀದ್ ಪ್ರಾರ್ಥನೆ ಬಳಿಕ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ

ತ್ಯಾಗ-ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಇಂದು ದೇಶಾದ್ಯಂತ ಆಚರಿಸಿದ್ದಾರೆ. ಸಾಮೂಹಿಕ ಪ್ರಾರ್ಥನೆ ನಡೆಸಿದ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹ ಇಂದು ಸಚಿವ ಜಮೀರ್ ಅಹಮದ್ ಜೊತೆಗೂಡಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಅಲ್ಲಿಯೇ ಸಮೀಪದಲ್ಲಿದ್ದ ಮಲೆ ಮಹಾದೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ.

ದೇವಸ್ಥಾನದ ಭೇಟಿ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಕೂಡಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯನವರು, ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಕ್ಕೆ ಸಂತಸವಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...