alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆಯಲ್ಲಿ ಭ್ರಷ್ಟಾಚಾರ: ಸಿಎಂ ಸೇರಿ 28 ಸಚಿವರ ವಿರುದ್ಧ ದೂರು

siddaramaiah m n 18

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ 28 ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಲಾಗಿದೆ. ಆರ್.ಟಿ.ಐ. ಕಾರ್ಯಕರ್ತ ಶಶಿಧರ್ ಎಂಬುವವರು ದೂರು ನೀಡಿದ್ದಾರೆ.

ಪೊಲೀಸ್ ವರ್ಗಾವಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಮುಖ್ಯಮಂತ್ರಿ ಹಾಗೂ ಸಚಿವರು ಶಿಫಾರಸು ಪತ್ರ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ಟಿ.ಬಿ.ಜಯಚಂದ್ರ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಎಸ್.ಆರ್.ಪಾಟೀಲ್, ಹೆಚ್.ಆಂಜನೇಯ, ಹೆಚ್.ಕೆ.ಪಾಟೀಲ್. ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರ ವಿರುದ್ಧ ದೂರು ನೀಡಲಾಗಿದೆ.

ಸಿಎಂ, ಸೇರಿದಂತೆ 28 ಸಚಿವರ ವಿರುದ್ಧ ದೂರು ನೀಡಿರುವುದು ಇದೇ ಮೊದಲೆನ್ನಲಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಹಕಾರ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್ ಅವರು, ವರ್ಗಾವಣೆಗೆ ಸಚಿವರು, ಶಾಸಕರು ಶಿಫಾರಸ್ಸು ಪತ್ರ ಕೊಡುವುದು ಸಾಮಾನ್ಯ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...