alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ ಮುಂದುವರೆದ ಸಂಪುಟ ಸರ್ಕಸ್

cm cm

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ.ಪರಮೇಶ್ವರ್ ನವದೆಹಲಿಯ 10, ಜನಪಥ್ ರಸ್ತೆಯಲ್ಲಿರುವ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಮಾಲೋಚನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೂಡ ಜೊತೆಗಿದ್ದರು. ಸೋನಿಯಾ ಗಾಂಧಿ ಅವರೊಂದಿಗೆ ಈ ಮೂವರೂ ನಾಯಕರು ಸುಮಾರು 45 ನಿಮಿಷ ಚರ್ಚೆ ನಡೆಸಿದರಾದರೂ, ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ. ಸಭೆ ಅಪೂರ್ಣವಾಗಿದೆ ಎನ್ನಲಾಗಿದೆ. ಸೋನಿಯಾ ಗಾಂಧಿ ಅವರ ನಿವಾಸದಿಂದ ಹೊರಬಂದ ಸಿದ್ಧರಾಮಯ್ಯ ಮಾತನಾಡಿ, ಸಂಪುಟ ಪುನರಚನೆಗೆ ಸಂಬಂಧಿಸಿದಂತೆ, ಚರ್ಚೆ ನಡೆಸಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮತ್ತೆ ಸಭೆ ಸೇರಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಸಂಪುಟ ರಚನೆ ಸರ್ಕಸ್ ಮುಂದುವರೆದಿದ್ದು, ಸಿದ್ಧರಾಮಯ್ಯ, ಕೆಲವು ಸಚಿವರನ್ನು ಕೈಬಿಟ್ಟು ಹಿರಿಯ ಶಾಸಕರು, ಯುವಕರಿಗೆ ಆದ್ಯತೆ ನೀಡಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಚ್ಚಿನ ಸಂಖ್ಯೆಯ ಸಚಿವರನ್ನು ಸಂಪುಟದಿಂದ ಕೈ ಬಿಡದಂತೆ ಹೇಳಿದ್ದು, ಇದೇ ಕಾರಣಕ್ಕೆ ತೀರ್ಮಾನ ಕೈಗೊಳ್ಳುವಲ್ಲಿ ವಿಳಂಬವಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...