alex Certify
ಕನ್ನಡ ದುನಿಯಾ       Mobile App
       

Kannada Duniya

ಫಲಾನುಭವಿಗಳ ಜೊತೆ ಸಿಎಂ ಸಂವಾದ

siddaramaiah11

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಬೆಂಗಳೂರಿನ ಜಿಕೆವಿಕೆ ಸಭಾಂಗಣದಲ್ಲಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಫಲಾನುಭವಿಗಳ ಅಭಿಪ್ರಾಯ ಆಲಿಸಿದರು. ಅನ್ನಭಾಗ್ಯ, ಮನಸ್ವಿನಿ, ಕ್ಷೀರಭಾಗ್ಯ, ವಿದ್ಯಾಸಿರಿ, ಕೃಷಿಭಾಗ್ಯ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳು, ಯೋಜನೆಯಿಂದ ತಮಗಾಗಿರುವ ಅನುಕೂಲಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಕೆಲವರು, ಯೋಜನೆಯ ಸಾಧಕ, ಬಾಧಕಗಳ ಬಗ್ಗೆ ಹೇಳಿಕೊಂಡು, ನ್ಯೂನತೆ ಸರಿಪಡಿಸಬೇಕೆಂದು ಕೋರಿದಾಗ, ಸಿಎಂ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

3 ವರ್ಷದಲ್ಲಿ ರಾಜ್ಯದ ಜನರ ಪರವಾಗಿ ಬದ್ಧತೆಯಿಂದ ಕೆಲಸ ಮಾಡಿದ್ದು, ಕಳಂಕ ರಹಿತವಾಗಿ ಆಡಳಿತ ನೀಡಿದ್ದೇವೆ. ಕಳೆದ 3 ವರ್ಷಗಳಲ್ಲಿ ಚುನಾವಣೆಯಲ್ಲಿ ನೀಡಲಾಗಿದ್ದ ಹಲವಾರು ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...