alex Certify
ಕನ್ನಡ ದುನಿಯಾ       Mobile App
       

Kannada Duniya

ಹರಿಪ್ರಸಾದ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

siddaramaiah_karnatka-CM

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಂತೆ ಸಂದರ್ಶನವೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ. ಕೆ. ಹರಿಪ್ರಸಾದ್ ಪರೋಕ್ಷವಾಗಿ ಹೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡುವ ಮೂಲಕ ಅವರ
ಹೇಳಿಕೆಯನ್ನು ಕಡೆಗಣಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರ ಬಂದು ಮೂರು ವರ್ಷವಾಗಿದೆ. ಮುಂದಿನ ಚುನಾವಣೆಗೆ ನಾವು ಯಾವ ರೀತಿ ರೆಡಿಯಾಗಬೇಕೆಂದರೆ, ಸರ್ಕಾರಕ್ಕೆ ಈಗಿನಿಂದಲೇ ಮೇಜರ್ ಸರ್ಜರಿ ಮಾಡಬೇಕಿದೆ ಎಂದು
ಹರಿಪ್ರಸಾದ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಎಐಸಿಸಿ ಅಧ್ಕಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವವರು ನಮ್ಮ ನಾಯಕರು.
ಯಾರ್ಯಾರೋ ಹೇಳಿದ್ದಕ್ಕೆಲ್ಲಾ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ಕುರಿತಂತೆ ಎದುರಾದ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ, ಹೈಕಮಾಂಡ್ ಮಾತಿಗೆ ನಾವು ಬೆಲೆ ಕೊಡುತ್ತೇವೆ ಬೇರೆಯವರ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎನ್ನುವ ಮೂಲಕ ಹರಿಪ್ರಸಾದ್ ಗೆ ಟಾಂಗ್ ಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...