alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು

ads cmn

ಮಂಡ್ಯ: ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ಬಂದ್ ಕೂಡ ಮಾಡಲಾಗಿದ್ದು, ಹೋರಾಟ ಇನ್ನೂ ಮುಂದುವರೆದಿದೆ.

ಹೀಗಿರುವಾಗಲೇ ಮಂಡ್ಯದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಜೆ.ಪಿ. ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಜೆ.ಪಿ. ಕಾರ್ಯಕರ್ತ ಸಿದ್ಧರಾಜೇ ಗೌಡ ಅವರು ಮಂಡ್ಯ ಪಶ್ಚಿಮ ಠಾಣೆ ಪೊಲೀಸರಿಗೆ ಸಿದ್ಧರಾಮಯ್ಯನವರ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ. ಸರ್ಕಾರ, ಮುಖ್ಯಮಂತ್ರಿ ಅವರೇ ಕಾವೇರಿ ವಿಚಾರದಲ್ಲಿ ನಡೆಯುತ್ತಿರುವ ಎಲ್ಲಾ ಘಟನೆಗಳಿಗೆ ಕಾರಣ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಮಾತು ನಂಬಿದ್ದರಿಂದ ರೈತರಿಗೆ ಬೆಳೆ ನಷ್ಟವಾಗಿದೆ. ಇದಕ್ಕೆಲ್ಲಾ ಅವರೇ ಕಾರಣರಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿರುವುದಾಗಿ ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...