alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ನಿದ್ರೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಇಂದು ತೆರೆ ಬಿದ್ದಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗಿನಿಂದಲೂ ರೆಸಾರ್ಟ್ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಇಂದು ಸದನದ ಕಲಾಪಕ್ಕೆ ಹಾಜರಾಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ಸದಸ್ಯ ಕೆ.ಆರ್. ರಮೇಶ್ ಕುಮಾರ್ ಅವರು ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ರಮೇಶ್ ಕುಮಾರ್ ಆಯ್ಕೆ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು.

ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆಗೂ ಮುನ್ನ ನೂತನ ಸ್ಪೀಕರ್ ರಮೇಶ್ ಕುಮಾರ್ ಅವರೂ ಮಾತನಾಡಿದ್ದು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಢ ನಿದ್ರೆಗೆ ಜಾರಿದ್ದರು. ಈ ಕುರಿತು ಈಗ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...