alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನ

ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ. ಜಮಖಂಡಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ.

2013 ಹಾಗೂ 2018 ರಲ್ಲಿ ಜಮಖಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ, 1999ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಪರಾಭವಗೊಳಿಸಿದ್ದರು.

ಸಿದ್ದು ನ್ಯಾಮಗೌಡರು ತೆರಳುತ್ತಿದ್ದ ಕಾರಿನ ಟಯರ್ ಬರ್ಸ್ಟ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ಮೂಲಕ ಜಮಖಂಡಿಗೆ ರವಾನೆ ಮಾಡಲಾಗಿದೆ.

ಜಮಖಂಡಿಯ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತಿದ್ದು, ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...