alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾಯದಿಂದ ಪಾರಾದ ಸರಿಗಮಪ ಸಿಂಗರ್

chann sing

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಕರೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಸರಿಗಮಪ ರಿಯಾಲಿಟಿ ಶೋ ವಿನ್ನರ್ ಚನ್ನಪ್ಪ ಅವರು ಗಾಯಗೊಂಡವರು.

ಚನ್ನಪ್ಪ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಸರಿಗಮಪ ಸೀಸನ್ 11ರ ವಿಜೇತರಾಗಿದ್ದು, ಬೆಂಗಳೂರಿನ ಯಲಹಂಕದಲ್ಲಿರುವ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸ್ಟುಡಿಯೋಗೆ ರೆಕಾರ್ಡಿಂಗ್ ಗೆ ತೆರಳಿದ್ದರು. ಅಲ್ಲಿ ಕೆಲಸ ಮುಗಿಸಿಕೊಂಡು, ಬೈಕ್ ನಲ್ಲಿ ವಾಪಸ್ ಆಗುವ ಸಂದರ್ಭದಲ್ಲಿ ಅವರಿಗೆ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಚನ್ನಪ್ಪ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸರಿಗಮಪ ರಿಯಾಲಿಟಿ ಶೋನಲ್ಲಿ ಚನ್ನಪ್ಪ ವಿಜೇತರಾದ ಬಳಿಕ ಅವರಿಗೆ ಹೆಚ್ಚಿನ ಅವಕಾಶ ದೊರೆತಿದ್ದು, ಅವರು, ಅರ್ಜುನ್ ಜನ್ಯ ಸ್ಟುಡಿಯೋದಲ್ಲಿ ರೆಕಾರ್ಡಿಂಗ್ ಮುಗಿಸಿಕೊಂಡು ವಾಪಸ್ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...