alex Certify
ಕನ್ನಡ ದುನಿಯಾ       Mobile App
       

Kannada Duniya

ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರ ಗಮನಕ್ಕೆ….

ಬೆಂಗಳೂರು: ಇನ್ನೇನು ಗೌರಿ-ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ಹಬ್ಬಕ್ಕಾಗಿ ಸಡಗರದ ಸಿದ್ಧತೆಗಳೂ ನಡೆಯುತ್ತಿವೆ. ಈ ನಡುವೆ ಈ ಬಾರಿ ಸಾರ್ವಜನಿಕ ಗಣೇಶ ವಿಗ್ರಹಗಳ ಸ್ಥಾಪನೆಗೆ ತ್ವರಿತವಾಗಿ ಅನುಮತಿ ನೀಡುವ ಉದ್ದೇಶದಿಂದ ಸರ್ಕಾರ ಏಕಗವಾಕ್ಷಿ ಯೋಜನೆಯನ್ನು ಅಳವಡಿಸಿದೆ.

ಹೌದು, ಸಾರ್ವಜನಿಕ ವೇದಿಕೆಯ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಒಂದೇ ಸೂರಿನಡಿ ಅನುಮತಿ ನೀಡುವ ನಿಟ್ಟಿನಲ್ಲಿ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈ ಮೂಲಕ ಏಕಗವಾಕ್ಷಿ ಪದ್ಧತಿ ಅಡಿಯಲ್ಲಿ ಅನುಮತಿ ನೀಡಲಾಗುತ್ತಿದೆ.

ಬಿಬಿಎಂಪಿಯ 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಂಗಳವಾರ ಬೆಳಗ್ಗೆ 9ರಿಂದ ರಾತ್ರಿ 11 ಗಂಟೆವರೆಗೆ ಸಂಘ-ಸಂಸ್ಥೆಗಳಿಂದ ಬರುವ ಅರ್ಜಿಗಳಿಗೆ ಏಕಗವಾಕ್ಷಿ ವ್ಯವಸ್ಥೆಯಡಿ ನಿರಾಕ್ಷೇಪಣಾ ಪತ್ರ (ಎನ್​ಒಸಿ) ನೀಡಲಾಗುತ್ತದೆ. ಬಿಬಿಎಂಪಿ, ಪೋಲಿಸ್, ಅಗ್ನಿಶಾಮಕ ಹಾಗೂ ಬೆಸ್ಕಾಂ ಅಧಿಕಾರಿಗಳ ಸಮಿತಿ ಅರ್ಜಿಗಳನ್ನು ಪರಿಶೀಲಿಸಲಿದೆ.

ಇನ್ನು ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಸ್ಯಾಂಕಿ ಕೆರೆ, ಹಲಸೂರು, ಯಡಿಯೂರು ಕೆರೆ ಸೇರಿ 22 ಕೆರೆಗಳನ್ನು ನಿಗದಿ ಮಾಡಲಾಗಿದೆ. ವಸತಿ ಪ್ರದೇಶದಿಂದ ಕೆರೆಗಳು ದೂರವಿರುವೆಡೆ ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪ್ರತಿ ವಲಯಗಳ ಪ್ರಮುಖ ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ಬಿಬಿಎಂಪಿಯಿಂದ 282 ಸ್ಥಳಗಳಲ್ಲಿ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 32 ಸ್ಥಳಗಳಲ್ಲಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ಸ್ಥಾಪಿಸಲಾಗುತ್ತದೆ. ಇದಲ್ಲದೆ 63 ಕಡೆ ತಾತ್ಕಾಲಿಕ ಟ್ಯಾಂಕ್ ಗಳಿಗೂ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...