alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ..?

BJP MP Ananth Kumar Hegde at parliament house in new delhi on thursday.Express photo by Anil Sharma.03.03.2016

ಶಿರಸಿ: ವೈದ್ಯರ ಮೇಲೆ ಉತ್ತರ ಕನ್ನಡ ಜಿಲ್ಲೆ ಬಿ.ಜೆ.ಪಿ. ಸಂಸದ ಅನಂತ್ ಕುಮಾರ್ ಹೆಗ್ಡೆ, ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಶಿರಸಿಯಲ್ಲಿ ನಡೆದಿದೆ.

ಅನಂತ್ ಕುಮಾರ್ ಹೆಗ್ಡೆ ಅವರ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ, ಶಿರಸಿಯ ಟಿ.ಎಸ್.ಎಸ್. ಆಸ್ಪತ್ರೆಗೆ ಸೇರಿಸಲಾಗಿತ್ತು.

ಈ ಸಂದರ್ಭದಲ್ಲಿ ವೈದ್ಯರು ತಕ್ಷಣಕ್ಕೆ ಸ್ಪಂದಿಸಿಲ್ಲ. ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂಬ ಆಕ್ರೋಶದಿಂದ ಅನಂತ್ ಕುಮಾರ್ ಹೆಗ್ಡೆ ರೋಷಾವೇಷ ವ್ಯಕ್ತಪಡಿಸಿದ್ದಲ್ಲದೇ ವೈದ್ಯರಾದ ಡಾ. ಬಾಲಚಂದ್ರ ಭಟ್, ಡಾ. ಮಧುಕೇಶ್ವರ್ ಹಾಗೂ ಸಿಬ್ಬಂದಿ ರಾಹುಲ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆ ಮಾಡಿರುವ ದೃಶ್ಯಗಳು ಆಸ್ಪತ್ರೆಯಲ್ಲಿ ಅಳವಡಿಸಿರುವ ಸಿ.ಸಿ. ಟಿ.ವಿ.ಯಲ್ಲಿ ಸೆರೆಯಾಗಿವೆ. ಈ ಸಂಬಂಧ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬಳಿಕ ಸಂಸದರ ಆಪ್ತರೊಬ್ಬರು, ವೈದ್ಯರು ತಮ್ಮ ಮೇಲೆ ಹಲ್ಲೆ ಮಾಡಿರುವುದಾಗಿ ಪ್ರತಿ ದೂರು ನೀಡಲು ಮುಂದಾಗಿದ್ದು, ರಾಜೀ ಸಂಧಾನ ನಡೆದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...