alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಎಂ. ಕೃಷ್ಣಾರನ್ನು ಭೇಟಿಯಾದ ಸಿದ್ದರಾಮಯ್ಯ

smk-siddaramaiahತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದಕ್ಕೆ ಸೆಡ್ಡು ಹೊಡೆದಿರುವ ಕರ್ನಾಟಕ ಸರ್ಕಾರ, ಬುಧವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನೀರು ಹರಿಸದಿರುವ ತೀರ್ಮಾನ ಕೈಗೊಂಡಿದೆ.

ನಿನ್ನೆ ಬೆಳಿಗ್ಗೆ ನಡೆದ ತುರ್ತು ಸಂಪುಟ ಸಭೆಯಲ್ಲೂ ನೀರು ಹರಿಸುವುದು ಬೇಡವೆಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಸರ್ವ ಪಕ್ಷ ಸಭೆಗೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪದ್ಮನಾಭ ನಗರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣಾ ಅವರ ಸದಾಶಿವ ನಗರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ವಿಶೇಷ ಅಧಿವೇಶನ ಕರೆಯುವಂತೆ ಕೋರಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸಿದ್ದರಾಮಯ್ಯನವರು ಅಲ್ಲಿಂದ ನೇರವಾಗಿ ಎಸ್.ಎಂ. ಕೃಷ್ಣಾರ ನಿವಾಸಕ್ಕೆ ತೆರಳಿದರು. ಮಾತುಕತೆ ವೇಳೆ ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಕೆರೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕು, ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಅವಧಿಯನ್ನು ವಿಸ್ತರಿಸಬೇಕು, ಅಲ್ಲದೇ ರೈತರ ಬೆಳೆಗೆ ಪರಿಹಾರ ನೀಡಬೇಕೆಂಬುದು ಸೇರಿದಂತೆ ಹಲವು ಸಲಹೆಗಳನ್ನು ಎಸ್.ಎಂ. ಕೃಷ್ಣಾ ಸಿದ್ದರಾಮಯ್ಯನವರಿಗೆ ನೀಡಿದ್ದಾರೆನ್ನಲಾಗಿದೆ. ಜೊತೆಗೆ ತಮಿಳುನಾಡಿಗೆ ನೀರು ಹರಿಸದಿರಲು ದಿಟ್ಟ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟದ ಸದಸ್ಯರನ್ನು ಕೃಷ್ಣಾ ಅಭಿನಂದಿಸಿದರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...