alex Certify
ಕನ್ನಡ ದುನಿಯಾ       Mobile App
       

Kannada Duniya

ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ

ಉಡುಪಿ: ಹೆಬ್ಬಾವು ಹಿಡಿಯುವ ಸಂದರ್ಭದಲ್ಲಿ ಕಚ್ಚಿಸಿಕೊಂಡ ವ್ಯಕ್ತಿಯೊಬ್ಬರು ಅದನ್ನೇ ಚೀಲದಲ್ಲಿ ಹಾಕಿಕೊಂಡು ಆಸ್ಪತ್ರೆಗೆ ತಂದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರ ಸಮೀಪದ ಪಾರ್ತಿಕಟ್ಟೆಯ ನಿವಾಸಿಯೊಬ್ಬರ ಮನೆಯ ಬಳಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಅವರು ಹಾವುಗಳನ್ನು ಹಿಡಿಯುವ ಜೋಸೆಫ್ ಲೂವಿಸ್ ಅವರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಲೂವಿಸ್ ಅವರು ಹಾವು ಹಿಡಿಯುವ ಸಂದರ್ಭದಲ್ಲಿ ಅವರ ಕೈಗೆ ಹಾವು ಕಚ್ಚಿದೆ. ಅದನ್ನು ಚೀಲದಲ್ಲಿ ತುಂಬಿಕೊಂಡು ಆಸ್ಪತ್ರೆಗೆ ಬಂದಿದ್ದಾರೆ.

ಹಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಲಾಗಿದೆ. ಲೂವಿಸ್ ಅವರು ಚಿಕಿತ್ಸೆ ಪಡೆದುಕೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಆಟೋ ಚಾಲಕರಾಗಿರುವ ಲೂವಿಸ್ ಈ ಭಾಗದ ಮನೆಗಳಲ್ಲಿ ಕಾಣಿಸಿಕೊಂಡ ನೂರಾರು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...