alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮನ ಹುಂಡಿ ಮತಗಟ್ಟೆ ಬಳಿ ಕಾಣಿಸಿಕೊಂಡ ಹಾವು

images

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮತ ಕ್ಷೇತ್ರ ಸಿದ್ದರಾಮನ ಹುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾವೊಂದು ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮತ ಹಕ್ಕನ್ನು ಚಲಾಯಿಸಲು ಬೆಂಗಳೂರಿನಿಂದ ಮೈಸೂರಿಗೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದರು.

ಮುಖ್ಯಮಂತ್ರಿಗಳು ಆಗಮಿಸುತ್ತಿದ್ದ ಹಿನ್ನಲೆಯಲ್ಲಿ ಅದಕ್ಕೂ ಮುನ್ನ ಪೊಲೀಸ್ ಸಿಬ್ಬಂದಿ, ಮತಗಟ್ಟೆ ಸುತ್ತ ಮುತ್ತ ತಪಾಸಣೆ ಕೈಗೊಂಡಿದ್ದು, ಈ ವೇಳೆ ಕೇರೆ ಹಾವೊಂದು ಹೊರ ಬಂದಿದೆ, ಇದನ್ನು ಕಂಡ ಗ್ರಾಮಸ್ಥರು ಅದನ್ನು ಹೊಡೆದು ಸಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...