alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಮಾಡಿಕೊಳ್ಳಲಿ ಇಲ್ಲ ಬಟ್ಟೆ ಬಿಚ್ಚಿ ಬೇಕಾದ್ರು ಕುಣಿಯಲಿ ಅದ್ರಿಂದ ನಮಗೇನು ಅಂದ್ರು ಸೋಮಣ್ಣ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ರೆ, ಕಮಲ ಪಾಳೆಯದ ವಿರುದ್ಧ ಜೆ.ಡಿ.ಎಸ್. ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಿಡಿ ಕಾರುತ್ತಿದ್ದಾರೆ. ಈಗ ಮಾಜಿ ಸಚಿವ ವಿ. ಸೋಮಣ್ಣ ಮೈತ್ರಿ ಸರ್ಕಾರದ ವಿರುದ್ಧ ಲೇವಡಿ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್, ಜೆ.ಡಿ.ಎಸ್ ಮೈತ್ರಿ ಮಾಡಿಕೊಂಡ್ರೆ, ಮಾಡಿಕೊಳ್ಳಲಿ. ಇಲ್ಲಾ ಬಟ್ಟೆ ಬಿಚ್ಚಿ ಕುಣಿಯಲಿ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಸಿ.ಎಂ. ಕುಮಾರಸ್ವಾಮಿ ಸಂಕಷ್ಟದಲ್ಲಿದ್ದಾರೆ. ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿದ್ದಾರೆ. ಬಿಟ್ಟರೆ, ಬೇರೆ ಶಾಸಕರನ್ನು ಪಕ್ಷಕ್ಕೆ ಕರೆ ತರುವ ಶಕ್ತಿ ಅವರಲ್ಲಿ ಇಲ್ಲ ಎಂದು ಸೋಮಣ್ಣ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿ.ಜೆ.ಪಿ. ಸ್ವಂತ ಬಲದ ಮೇಲೆ ಚುನಾವಣೆ ಎದುರಿಸಲಿದೆ. ಯಾರು, ಯಾರ ಜೊತೆನಾದ್ರೂ ಮೈತ್ರಿ ಮಾಡಿಕೊಳ್ಳಲಿ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಯೊಂದಿಗೆ ಜನರ ಮುಂದೆ ಹೋಗುತ್ತೇವೆ. ಸೋಲು-ಗೆಲುವಿನ ಭಯ ನಮಗೆ ಇಲ್ಲ ಎಂದು ಸೋಮಣ್ಣ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...