alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕರು ತಂಗಿದ್ದ ಹೋಟೆಲ್ಗೆ ತೆರಳಿ ಅಭಿನಂದಿಸಿದ ಸೋನಿಯಾ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಇಂದು ಅಸ್ತಿತ್ವಕ್ಕೆ ಬಂದಿದ್ದು, ಸಂಜೆ 4-30 ಕ್ಕೆ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದು, ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಅವರುಗಳನ್ನು ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.

ಬಳಿಕ ಕಾಂಗ್ರೆಸ್ ಶಾಸಕರು ತಂಗಿದ್ದ ಹಿಲ್ಟನ್ ಹೋಟೆಲ್ಗೆ ತೆರಳಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೂತನವಾಗಿ ಆಯ್ಕೆಯಾದ ಶಾಸಕರನ್ನು ಅಭಿನಂದಿಸಿರಲ್ಲದೇ ಬಿಜೆಪಿ ಆಮಿಷಕ್ಕೆ ಒಳಗಾಗದೆ ಒಗ್ಗಟ್ಟು ಕಾಪಾಡಿಕೊಂಡಿದ್ದಕ್ಕೆ ಧನ್ಯವಾದ ಹೇಳಿದರು.

ಬಳಿಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ವಿಧಾನಸೌಧಕ್ಕೆ ತೆರಳಿ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...