alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪೀಕರ್ ಆಯ್ಕೆಗೆ ಕಾಂಗ್ರೆಸ್ ವಿರೋಧ : ವಿಶ್ವಾಸಮತ ಯಾಚನೆ ತಪ್ಪಿಸಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್

ವಿಶ್ವಾಸಮತ ಯಾಚನೆಯಿಂದ ಬಚಾವ್ ಆಗಲು ಬಿಜೆಪಿ ನಾಯಕರು ಮಾಸ್ಟರ್ ಪ್ಲಾನ್ ಮಾಡ್ತಿದ್ದಾರೆ. ಬಹುಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೊರೆ ಹೋಗಲು ಮುಂದಾಗಿದ್ದಾರಂತೆ. ತ್ರಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇತ್ತ ಸ್ಪೀಕರ್ ಆಗಿ ಬೋಪಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬೋಪಯ್ಯ ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಆದ್ರೆ ಸ್ಪೀಕರ್ ಆಯ್ಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ನಿಯಮದಂತೆ ಸದನದ ಹಿರಿಯ ಸದಸ್ಯರಿಗೆ ಅವಕಾಶ ನೀಡಬೇಕು ಎಂದು ಕೈ ನಾಯಕರು ಆಗ್ರಹಿಸಿದ್ದಾರೆ.

ಸುಪ್ರೀಂ ಆದೇಶದ ನಂತ್ರ ಸಿಎಂ ಕಚೇರಿಗೆ ಬೀಗ ಜಡಿಯಲಾಗಿದೆ. ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದ ಯಡಿಯೂರಪ್ಪ ನಿನ್ನೆ ಸಿಎಂ ಕಚೇರಿಗೆ ಪೂಜೆ ಮಾಡಿ ಪ್ರವೇಶ ಮಾಡಿದ್ದರು. ಸಿಎಂ ಕಚೇರಿ ಪ್ರವೇಶ ಮಾಡಿ ಒಂದೇ ದಿನಕ್ಕೆ ಕಚೇರಿಗೆ ಬೀಗ ಬಿದ್ದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...