alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡಿ ಬೆಟ್ಟದಲ್ಲಿಂದು ನಾಡ ಅಧಿದೇವತೆಯ ವರ್ಧಂತ್ಯುತ್ಸವ

ಮೈಸೂರು: ಆಷಾಡ ಶುಕ್ರವಾರ ಪ್ರಯುಕ್ತ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತ್ಯುತ್ಸವ. ಈ ಹಿನ್ನಲೆಯಲ್ಲಿ ಮುಂಜಾನೆಯಿಂದಲೇ ಭಕ್ತರು ಚಾಮುಂಡೇಶ್ವರಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಆಗಮಿಸುತ್ತಿದ್ದಾರೆ.

ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರ ದಿನದಂದು ದೇವಿಯ ವರ್ಧಂತಿ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ಈ ವೇಳೆ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥಗಳು ನೇರವೇರುತ್ತವೆ ಎಂಬ ನಂಬಿಕೆಯಿದೆ.

ಚಾಮುಂಡಿ ಬೆಟ್ಟವನ್ನು ಹೂಗಳಿಂದ ಅಲಂಕರಿಸಲಾಗಿದ್ದು, ಚಾಮುಂಡಿದೇವಿಗೆ ವಿಶೇಷ ಪೂಜೆ ಏರ್ಪಡಿಸಲಾಗಿದೆ. ವಿವಿಧ ಹೂಗಳಿಂದ ಕಂಗೊಳಿಸುತ್ತಿರುವ ನಾಡದೇವತೆ ಚಾಮುಂಡೇಶ್ವರಿ ದೇವಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದೆ.

ಮೈಸೂರು ರಾಜಮನೆತನದ ಸಮ್ಮುಖದಲ್ಲಿ ಪಲ್ಲಕಿ ಉತ್ಸವ ನಡೆಯಲಿದ್ದು, ಉತ್ಸವದ ಮೆರವಣಿಗೆಯಲ್ಲಿ ಯದುವಂಶದ ಯದುವೀರ ಒಡೆಯರ್ ಭಾಗಿಯಾಗಲಿದ್ದಾರೆ.

ಇನ್ನು ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಭಕ್ತರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...