alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪೀಕರ್ ಚುನಾವಣೆ ಸಂದರ್ಭದಲ್ಲೇ ಗೊತ್ತಾಗಲಿದೆ ಸರ್ಕಾರದ ಬಹುಮತ

ಎರಡು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಇಂದು ಅಗ್ನಿಪರೀಕ್ಷೆ ಎದುರಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.

ಅದಕ್ಕೂ ಮುನ್ನ ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ರಮೇಶ್ ಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್ ಕುಮಾರ್ ಕಣಕ್ಕಿಳಿದಿದ್ದಾರೆ.

ಮೈತ್ರಿಕೂಟದ ಅಭ್ಯರ್ಥಿ ರಮೇಶ್ ಕುಮಾರ್ ನೂತನ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ. ಸ್ಪೀಕರ್ ಚುನಾವಣೆ ಫಲಿತಾಂಶದಲ್ಲೇ ಕುಮಾರಸ್ವಾಮಿಯವರ ಸರ್ಕಾರದ ಬಹುಮತ ಬಹುತೇಕ ತಿಳಿದುಬರಲಿದೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ವಿಶ್ವಾಸ ಮತಯಾಚನೆಗೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು, ವಿಶ್ವಾಸ ಮತಯಾಚನೆಯಲ್ಲಿ ಕುಮಾರಸ್ವಾಮಿಯವರ ಸರ್ಕಾರ ಯಶಸ್ವಿಯಾಗಲಿದೆ ಎನ್ನಲಾಗುತ್ತಿದೆ.

ಹಿಲ್ಟನ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಶಾಸಕರು ಹಾಗೂ ದೇವನಹಳ್ಳಿ ಸಮೀಪದ ಗಾಲ್ಫ್ ಲಿಂಕ್ ರೆಸಾರ್ಟ್ ನಲ್ಲಿದ್ದ ಜೆಡಿಎಸ್ ಶಾಸಕರು ಬಸ್ ಗಳಲ್ಲಿ ವಿಧಾನಸೌಧದತ್ತ ತೆರಳುತ್ತಿದ್ದು, ಸ್ಪೀಕರ್ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿರುವ ಶಾಸಕರು ಬಳಿಕ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...