alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ: ಬಿಗಿ ಭದ್ರತೆ

ಉಡುಪಿ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ಆಗಸ್ಟ್ 26 ರಂದು ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ರನಿಲ್ ವಿಕ್ರಮ ಸಿಂಘೆ, ಅವರ ಪತ್ನಿ ಮೈತ್ರಿ, ಶ್ರೀಲಂಕಾ ಡೆಪ್ಯುಟಿ ಹೈಕಮಿಷನರ್ ಕೃಷ್ಣಮೂರ್ತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ.

ಕೊಲಂಬೊದಿಂದ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿರುವ ಅವರು ಶನಿವಾರ ಬೆಳಿಗ್ಗೆ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ.

ಶ್ರೀಲಂಕಾ ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ದೇವಾಲಯದ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಬೈಂದೂರು ಅರೆಶಿರೂರು ಹೆಲಿಪ್ಯಾಡ್ ನಿಂದ ವಿಶೇಷ ಭದ್ರತೆಯೊಂದಿಗೆ ಅವರನ್ನು ದೇವಾಲಯಕ್ಕೆ ಕರೆತರಲಾಗುತ್ತದೆ. ಪೂಜೆ ಸಲ್ಲಿಸಿದ ಬಳಿಕ ಅವರು ಬೆಂಗಳೂರಿಗೆ ವಾಪಸ್ ತೆರಳುವರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...