alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ.ಕೆ.

ಬೆಳ್ತಂಗಡಿ: ಇಂದು ಬೆಳಗ್ಗೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಪತ್ನಿ ಅನಿತಾ ಕುಮಾರಸ್ವಾಮಿಯವರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಸನ್ನಿಧಿ ಅತಿಥಿ ಗೃಹದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದರು.

ನಂತರ ಶ್ರೀ ಮಂಜುನಾಥನ ದರ್ಶನಕ್ಕೆ ಬಂದ ಸಂದರ್ಭದಲ್ಲಿ ಕುಮಾರಸ್ವಾಮಿ ದಂಪತಿಗಳಿಗೆ ಪೂರ್ಣಕುಂಭ ಮತ್ತು ವಾದ್ಯಗಳೊಂದಿಗೆ ಸ್ವಾಗತ ನೀಡಲಾಯಿತು. ಬಳಿಕ ಶ್ರೀಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ಕುಮಾರಸ್ವಾಮಿ ತೆರಳಿದರು.

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದ ಹೆಚ್.ಡಿ. ಕುಮಾರಸ್ವಾಮಿಯವರು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ದೇವರ ಆಶೀರ್ವಾದ ಮತ್ತು ರಾಜ್ಯದ ಜನತೆಯ, ಅಭಿಮಾನಿಗಳ ಅಭಿಮಾನದಿಂದ ನಾನು ಮುಖ್ಯಮಂತ್ರಿಯಾಗುತ್ತಿದ್ದು, ನಾನು ಅಧಿಕಾರದಲ್ಲಿರುವವರೆಗೆ ಯಾವುದೇ ಗೊಂದಲಗಳಿಲ್ಲದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸುಭದ್ರ, ಜನಪರ ಸರ್ಕಾರ ನಡೆಸುವುದೇ ನನ್ನ ಧ್ಯೇಯ ಎಂದು ಅವರು ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...