alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶ್ರೀನಿವಾಸ್ ಪ್ರಸಾದ್

srinivas-prasad-vನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ. ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಕಛೇರಿಗೆ ತೆರಳಿದ ಶ್ರೀನಿವಾಸ್ ಪ್ರಸಾದ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು ಸಚಿವ ಸಂಪುಟ ಪುನಾರಚನೆ ವೇಳೆ ಮುಖ್ಯಮಂತ್ರಿಗಳು ಕೈ ಬಿಟ್ಟಾಗಲೇ ಶ್ರೀನಿವಾಸ್ ಪ್ರಸಾದ್, ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರಾದರೂ ಹಿರಿಯ ಕಾಂಗ್ರೆಸ್ ಮುಖಂಡರು ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಪಕ್ಷವನ್ನೂ ತೊರೆಯಲಿದ್ದಾರೆನ್ನಲಾಗಿದ್ದು, ಬಿಜೆಪಿ ಸೇರ್ಪಡೆಗೊಳ್ಳುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಈ ಕುರಿತು ಈಗಾಗಲೇ ಮಾತುಕತೆ ನಡೆಸಿರುವ ಶ್ರೀನಿವಾಸ್ ಪ್ರಸಾದ್, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...