alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

srinivas-prasad-vನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಪ್ರಸಾದ್, ತಮ್ಮ ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಕಡೆಗೂ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನದಿಂದ ತಮ್ಮನ್ನು ಕೈ ಬಿಟ್ಟಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಅಸಮಾಧಾನಗೊಂಡಿದ್ದ ಶ್ರೀನಿವಾಸ್ ಪ್ರಸಾದ್, ಆ ಸಂದರ್ಭದಲ್ಲೇ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರಾದರೂ ಕಾಂಗ್ರೆಸ್ ಹಿರಿಯ ನಾಯಕರು ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನದಿಂದ ಹಿಂದೆ ಸರಿಯದ ಶ್ರೀನಿವಾಸ್ ಪ್ರಸಾದ್, ಅಕ್ಟೋಬರ್ 17 ರಂದು ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜೀನಾಮೆ ನೀಡಿ ಮೂರು ದಿನಗಳಾದರೂ ಅಂಗೀಕಾರವಾಗದ ಕಾರಣ ಟೀಕೆಗಳು ಸಹ ಕೇಳಿ ಬಂದಿದ್ದು, ಇದೀಗ ರಾಜೀನಾಮೆ ಅಂಗೀಕಾರವಾಗಿದೆ. ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳಿರುವ ಕಾರಣ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ನಿಶ್ಚಿತವಾಗಿದ್ದು, ಕಾಂಗ್ರೆಸ್ ಗೂ ಗುಡ್ ಬೈ ಹೇಳಲಿರುವ ಶ್ರೀನಿವಾಸ್ ಪ್ರಸಾದ್, ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆಂಬುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...