alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೊಂದು ಮಾಹಿತಿ

10-th

ಬೆಂಗಳೂರು: ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಹಾಲ್ ಗೆ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದಿಲ್ಲ. ಬೆಳಿಗ್ಗೆ 9.30 ಗಂಟೆಯೊಳಗೆ ಪ್ರವೇಶಿಸಬೇಕೆಂದು ತಿಳಿಸಲಾಗಿದೆ.

ಮಾರ್ಚ್ 30 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮೊದಲ ಬೆಲ್ ಬಾರಿಸುವ ಬೆಳಿಗ್ಗೆ 9.15 ರಿಂದ ಅಂತಿಮ ಬೆಲ್ ಬಾರಿಸುವ 9.30 ರೊಳಗೆ ಕೊಠಡಿಯಲ್ಲಿ ಹಾಜರಿರಬೇಕೆಂದು ಸೂಚನೆ ನೀಡಲಾಗಿದೆ.

ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ. ಟಿ.ವಿ. ಕಡ್ಡಾಯವಾಗಿ ಅಳವಡಿಸಲು ಸೂಚಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡಳಿಯ ನಿರ್ದೇಶಕಿ ಯಶೋದಾ ಬೋಪಣ್ಣ ತಿಳಿಸಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...