alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ ಎಸ್ ಎಲ್ ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯಲ್ಲಿ ಸಕಲ ಸಿದ್ದತೆ

ಶಿವಮೊಗ್ಗ : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾರ್ಚ್ 23 ರಿಂದ ಆರಂಭವಾಗಲಿದೆ.

ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ ನಡೆಯಲಿದ್ದು, ಈಗಾಗಲೇ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 25,934 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 11,154 ಬಾಲಕರು, 11,578 ಬಾಲಕಿಯರಿದ್ದಾರೆ. 2,690 ಅನುತ್ತೀರ್ಣ ಅಭ್ಯರ್ಥಿಗಳು, 420 ಖಾಸಗಿ ಅಭ್ಯರ್ಥಿಗಳು, 92 ಖಾಸಗಿ ಅನುತ್ತೀರ್ಣ ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

ಜಿಲ್ಲೆಯಲ್ಲಿ 82 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಶಿವಮೊಗ್ಗ 24, ಭದ್ರಾವತಿ 15, ಸಾಗರ 10, ಶಿಕಾರಿಪುರ 11, ಸೊರಬ 10, ಹೊಸನಗರ 05, ತೀರ್ಥಹಳ್ಳಿಯ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳು ಯಾವುದು ಇಲ್ಲ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ಇಲ್ಲದಂತೆ 66 ವೀಕ್ಷಕರನ್ನು ನೇಮಿಸಲಾಗಿದೆ.

ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತದಳ ನಿಯೋಜಿಸಿದ್ದು, 3 ಮಂದಿಯ ತಂಡ ಇರುವ ಮೊಬೈಲ್ ಸ್ಕ್ವ್ಯಾಡ್ ಕಾರ್ಯನಿರ್ವಹಿಸಲಿದೆ. ಇದೇ ಮೊದಲ ಬಾರಿಗೆ ಸಿಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೂ ರವಾನೆಯಾಗುವವರೆಗೆ ಪ್ರಶ್ನೆ ಪತ್ರಿಕೆ ಬಂಡಲ್ ಗಳನ್ನು ಖಜಾನೆಯಲ್ಲಿ ಸ್ವೀಕರಿಸುವ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಬಂಡಲ್ ತೆರೆಯುವವರೆಗೆ ವೀಡಿಯೋ ಚಿತ್ರೀಕರಣ ಮಾಡಲಾಗುವುದು.

ಯಾವುದೇ ಅಕ್ರಮಕ್ಕೆ ಅವಕಾಶ ಇಲ್ಲದಂತೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತು 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...