alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಲಾಗಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿಗಳು

sslc nm 123

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ಮನನೊಂದು ರಾಜ್ಯದ ವಿವಿಧ ಕಡೆಗಳಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ತಾಲ್ಲೂಕಿನ ಶಿಂಡೇನಹಳ್ಳಿ ಗ್ರಾಮದಲ್ಲಿ ಫೇಲಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೈಸೂರಿನ ಶಾಲೆಯೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಊರಿಗೆ ಬಂದಿದ್ದು, ಸಂಬಂಧಿಯೊಬ್ಬರು ಫೋನ್ ಮಾಡಿ ಫಲಿತಾಂಶದ ಬಗ್ಗೆ ತಿಳಿಸಿದ್ದರು. ಇದರಿಂದ ನೊಂದ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಬಿದರವಾಡಿ ಗ್ರಾಮದ ವಿದ್ಯಾರ್ಥಿನಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿತ್ರದುರ್ಗ ಜಿಲ್ಲೆಯ ಬೊಮ್ಮಕ್ಕನಹಳ್ಳಿಯ ವಿದ್ಯಾರ್ಥಿನಿ ಹಿರಿಯೂರಿನ ಶಾಲೆಯಲ್ಲಿ ಓದುತ್ತಿದ್ದು, ಫೇಲಾದ ಕಾರಣ ಮನನೊಂದು ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...