alex Certify
ಕನ್ನಡ ದುನಿಯಾ       Mobile App
       

Kannada Duniya

SSLC ರಿಸಲ್ಟ್: ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ

sslc-result-2017-karnataka

2017 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದವರ ಪೈಕಿ ಶೇ.67.87 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 8.5 ರಷ್ಟು ಫಲಿತಾಂಶ ಕಡಿಮೆಯಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಛೇರಿಯಲ್ಲಿ ಈ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ವಿದ್ಯಾರ್ಥಿನಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ ಎಂದು ತಿಳಿಸಿದರು.

ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಚಿಕ್ಕೋಡಿ ತೃತೀಯ ಸ್ಥಾನ ಪಡೆದುಕೊಂಡಿದೆ. ಬೀದರ್ ಜಿಲ್ಲೆ ಫಲಿತಾಂಶದಲ್ಲಿ ಕಡೆಯ ಸ್ಥಾನದಲ್ಲಿದೆ. http://karresults.nic.in ಹಾಗೂ http://sslc.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದ್ದು, ನಾಳೆ ಬೆಳಿಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...