alex Certify
ಕನ್ನಡ ದುನಿಯಾ       Mobile App
       

Kannada Duniya

ಜೂನ್ 20 ರಿಂದ ಪೂರಕ ಪರೀಕ್ಷೆ

results m 16 nm

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.79.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ ವಿದ್ಯಾರ್ಥಿ ರಂಜನ್, 625 ಕ್ಕೆ 625 ಅಂಕ ಗಳಿಸುವ ಮೂಲಕ ದಾಖಲೆ ಬರೆದಿದ್ದಾನೆ.

ರಾಜ್ಯದಲ್ಲಿ 52 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ. 3 ಸರ್ಕಾರಿ, 3 ಅನುದಾನಿತ ಶಾಲೆಗಳು, 43 ಅನುದಾನರಹಿತ ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ. 1569 ಶಾಲೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ಬಂದಿದೆ. ಜೂನ್ 20 ರಿಂದ 27 ರವರೆಗೆ ಪೂರಕ ಪರೀಕ್ಷೆ ನಡೆಸಲಾಗುವುದು. ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಇದೇ ಮೇ 25 ಕೊನೆಯ ದಿನವಾಗಿದೆ. ಅಷ್ಟರೊಳಗೆ ಪೂರಕ ಪರೀಕ್ಷೆ ನೋಂದಾಯಿಸಿಕೊಳ್ಳಬೇಕೆಂದು ಹೇಳಲಾಗಿದೆ.

ಬೆಂಗಳೂರು ಗ್ರಾಮೀಣ ಜಿಲ್ಲೆಗೆ ಶೇ 89.63ರಷ್ಟು ಫಲಿತಾಂಶ ಬಂದಿದ್ದು, ಮೊದಲ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಗೆ ಶೇ.89.52ರಷ್ಟು ಫಲಿತಾಂಶ ಬಂದಿದ್ದು, 2ನೇ ಸ್ಥಾನ ಬಂದಿದೆ. ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಶೇ. 56.68 ರಷ್ಟು ಫಲಿತಾಂಶ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...