alex Certify
ಕನ್ನಡ ದುನಿಯಾ       Mobile App
       

Kannada Duniya

SSLC ರಿಸಲ್ಟ್: ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ

kar results 2362016 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದವರ ಪೈಕಿ ಶೇ.79.16 ಮಂದಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 2 ರಷ್ಟು ಫಲಿತಾಂಶ ಕಡಿಮೆಯಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಛೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ವಿದ್ಯಾರ್ಥಿನಿಯರು ಶೇ.82.64 ಫಲಿತಾಂಶ ಪಡೆದಿದ್ದರೆ, ಶೇ.75.84 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದರು.

ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಮಂಗಳೂರು ತೃತೀಯ ಸ್ಥಾನ ಪಡೆದುಕೊಂಡಿದೆ. ಭದ್ರಾವತಿಯ ಪೂರ್ಣ ಪ್ರಜ್ಞಾ ಶಾಲೆಯ ಎಸ್. ರಂಜನ್ 625 ಅಂಕಗಳಿಗೆ 625 ಅಂಕ ಗಳಿಸಿದ್ದಾನೆ. ಬಳ್ಳಾರಿ ಜಿಲ್ಲೆ ಫಲಿತಾಂಶದಲ್ಲಿ ಕಡೆಯ ಸ್ಥಾನದಲ್ಲಿದೆ. ಮೂರು ಸರ್ಕಾರಿ ಶಾಲೆಗಳು ಈ ಬಾರಿ ಶೂನ್ಯ ಫಲಿತಾಂಶ ಪಡೆದಿವೆ. www.sslc.kar.nic.in ಮತ್ತು www.karresults.nic.in ವೆಬ್ ಸೈಟ್ ಗಳಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ನಾಳೆ ಬೆಳಿಗ್ಗೆ 10 ಗಂಟೆಗೆ ಆಯಾ ಶಾಲೆಗಳಲ್ಲಿ ಪ್ರಕಟವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...