alex Certify
ಕನ್ನಡ ದುನಿಯಾ       Mobile App
       

Kannada Duniya

ನಾಡಹಬ್ಬ ದಸರಾ ಆಚರಣೆಗೆ ತೊಡಕಾಗುವುದಿಲ್ಲ ನೀತಿ ಸಂಹಿತೆ

ಮೈಸೂರು: ನಾಡಹಬ್ಬ ದಸರಾಗೆ ಉಪ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ದಸರಾ ಸಂಭ್ರಮಕ್ಕೆ ಇದ್ದ ಅಡ್ಡಿ ಆತಂಕ ದೂರವಾದಂತಾಗಿದೆ.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವುದರಿಂದ ಚುನಾವಣಾ ದಿನಾಂಕ ಪ್ರಕಟಗೊಂಡಾಕ್ಷಣ ನೀತಿ ಸಂಹಿತೆ ಜಾರಿ ಮಾಡಲಾಗಿತ್ತು. ಇದರಿಂದ ದಸರಾ ಸಂಭ್ರಮಾಚರಣೆ ಮಧ್ಯೆ ಒಂದಷ್ಟು ಗೊಂದಲ ಸೃಷ್ಟಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಆಯೋಗಕ್ಕೆ ಪತ್ರ ಬರೆದು ದಸರಾ ನಾಡಹಬ್ಬವಾಗಿರುವುದರಿಂದ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಆ ಬಳಿಕ ಸ್ಪಷ್ಟನೆ ನೀಡಿರುವ ಆಯೋಗ, ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ದಸರಾ ರದ್ದಾಗಲಿದ್ದು, ಉಳಿದಂತೆ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ, ಇದರಲ್ಲಿ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...