alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ಸುದ್ದಿ: ಮತ್ತಷ್ಟು ಮದ್ಯದಂಗಡಿ ತೆರೆಯಲು ಸಿದ್ಧತೆ ನಡೆಸಿದೆ ಸರ್ಕಾರ

ರೈತರ ಸಾಲ ಮನ್ನಾ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಈ ಯೋಜನೆಗಳ ಅನುಷ್ಠಾನಕ್ಕೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಹೀಗಾಗಿ ಬೊಕ್ಕಸಕ್ಕೆ ಹಣ ತುಂಬಿಸಲು ರಾಜ್ಯ ಸರ್ಕಾರ ಮತ್ತಷ್ಟು ಮದ್ಯದಂಗಡಿ ತೆರೆಯಲು ಪರವಾನಗಿ ನೀಡಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

ಮದ್ಯದಂಗಡಿ ಆರಂಭಕ್ಕೆ ಮುನ್ನ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದ್ದು, 2011 ರ ಜನಸಂಖ್ಯೆ ಮತ್ತು ಕೋಟಾದ ಪ್ರಕಾರ ಪ್ರತಿ ತಾಲೂಕುಗಳಲ್ಲಿ ಎಷ್ಟು ಚಿಲ್ಲರೆ ಮದ್ಯದಂಗಡಿಗಳನ್ನು ಆರಂಭಿಸಬಹುದೆಂಬ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ.

ಒಂದು ಅಂದಾಜಿನಂತೆ ರಾಜ್ಯದಲ್ಲಿ 1750 ಕ್ಕೂ ಅಧಿಕ ಮದ್ಯದಂಗಡಿಗಳಿಗೆ ಬೇಡಿಕೆ ಇದೆ ಎನ್ನಲಾಗಿದ್ದು, ಆದರೆ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಹಾಗೂ ಮಹಿಳೆಯರಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ಇರುವ ಮದ್ಯದಂಗಡಿಗಳಿಂದ ಸಾರ್ವಜನಿಕರು ಹಣ ಮತ್ತು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದು, ಮತ್ತಷ್ಟು ಮದ್ಯದಂಗಡಿ ಆರಂಭಿಸಿದರೆ ಸಂಕಷ್ಟ ಶುರುವಾಗುತ್ತದೆ ಎಂಬುದು ವಿರೋಧ ಮಾಡುತ್ತಿರುವವರ ಮನವಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...