alex Certify
ಕನ್ನಡ ದುನಿಯಾ       Mobile App
       

Kannada Duniya

STP ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರಿನ ದೊಡ್ಡನೆಕ್ಕುಂದಿ ಎ.ಇ.ಸಿ.ಎಸ್. ಲೇ ಔಟ್ ನಲ್ಲಿ ಎಸ್.ಟಿ.ಪಿ.(ಸೀವೇಜ್ ಟ್ರೀಟ್ ಮೆಂಟ್ ಪ್ಲಾಂಟ್) ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ರಾಯಚೂರು ಮೂಲದ ರಾಮು(35), ರವಿ(25) ಮೃತಪಟ್ಟವರೆಂದು ಗುರುತಿಸಲಾಗಿದೆ. ವಾಣಿಜ್ಯ ಮಳಿಗೆಯಲ್ಲಿನ ಎಸ್.ಟಿ.ಪಿ. ಸ್ವಚ್ಛಗೊಳಿಸುವ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಮೊದಲಿಗೆ ರಾಮು ಸ್ವಚ್ಛಗೊಳಿಸಲು ಕೆಳಗೆ ಇಳಿದಿದ್ದು, ಉಸಿರುಕಟ್ಟಿ ರಕ್ಷಣೆಗೆ ಕೂಗಿದ್ದಾರೆ. ಆತನನ್ನು ರಕ್ಷಿಸಲು ಹೋದ ರವಿಯೂ ಉಸಿರುಕಟ್ಟಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಮೇಲೆತ್ತಿದ್ದಾರೆ.

ಹೆಚ್.ಎ.ಎಲ್. ಠಾಣೆ ಪೊಲೀಸರು ವಾಣಿಜ್ಯ ಮಳಿಗೆ ವ್ಯವಸ್ಥಾಪಕ ವೆಂಕಟೇಶ್ ಹಾಗೂ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಆಯುಶ್ ಗುಪ್ತಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...