alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ “ಬಡವರ ಬಂಧು” ಯೋಜನೆಗೆ ಇಂದು ಚಾಲನೆ

ಮೀಟರ್ ಬಡ್ಡಿಗೆ ಹಣ ಪಡೆದು ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ, ಕರ್ನಾಟಕ ಸರ್ಕಾರ ಜಾರಿಗೆ ತರುತ್ತಿರುವ “ಬಡವರ ಬಂಧು” ಯೋಜನೆಗೆ ಇಂದು ಚಾಲನೆ ಸಿಗಲಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಾರಿಗೆ ಬರಲಿದೆ.

“ಬಡವರ ಬಂಧು” ಯೋಜನೆಯಡಿ ರಾಜ್ಯದ 53 ಸಾವಿರ ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡುವ ಉದ್ದೇಶ ಹೊಂದಲಾಗಿದ್ದು, ಇವರುಗಳಿಗೆ 2,000 ರೂ. ಗಳಿಂದ 10,000 ರೂ. ಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಯಶವಂತಪುರದ ತರಕಾರಿ ಮಾರುಕಟ್ಟೆ ಬಳಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...