alex Certify
ಕನ್ನಡ ದುನಿಯಾ       Mobile App
       

Kannada Duniya

ಮುಷ್ಕರವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನಗಳು

Auto

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನಲೆಯಲ್ಲಿ ಖಾಸಗಿ ವಾಹನಗಳ ಲಕ್ ಕುದುರಿದೆ. ಪ್ರಯಾಣಿಕರು ಈ ವಾಹನಗಳನ್ನೇ ಅವಲಂಬಿಸಿದ್ದು, ಬೆಂಗಳೂರಿನಲ್ಲಿ ಖಾಸಗಿ ಬಸ್, ಆಟೋ ಹಾಗೂ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯಲಾಗುತ್ತಿದೆ.

ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಮುಷ್ಕರ ಕೈಗೊಂಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳ ಸಂಚಾರಕ್ಕೆ ಸಾರಿಗೆ ಇಲಾಖೆ ವಿಶೇಷ ಅನುಮತಿ ನೀಡಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆಟೋದಲ್ಲಿ ಮೆಜಿಸ್ಟಿಕ್ ನಿಂದ ಹೆಬ್ಬಾಳಕ್ಕೆ 700 ರೂ., ಶಾಂತಿನಗರಕ್ಕೆ 300 ರೂ. ಶಿವಾನಂದ ಸರ್ಕಲ್ ಗೆ 150 ರೂ. ಹೀಗೆ ಮನಬಂದಂತೆ ಹಣ ಕೇಳಲಾಗುತ್ತಿದೆ ಎನ್ನಲಾಗಿದೆ.

ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ಬಹುತೇಕ ಕಡೆಗಳಲ್ಲಿ ಖಾಸಗಿ ವಾಹನಗಳಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ. ಖಾಸಗಿ ಬಸ್ ಇರುವ ಕಡೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಿಸಿಲ್ಲ. ಅಲ್ಲಿ ಸಮಸ್ಯೆ ಆಗಿಲ್ಲ. ಸರ್ಕಾರಿ ಬಸ್ ಅವಲಂಬಿಸಿರುವವರಿಗೆ ಮುಷ್ಕರದ ಬಿಸಿ ತಟ್ಟಿದೆ.

ಪ್ರಯಾಣಿಕರು ಅನಿವಾರ್ಯವಾಗಿ ದುಬಾರಿ ದರ ತೆತ್ತು ಓಡಾಡುವಂತಾಗಿದೆ. ಇನ್ನು ಹೊರ ಊರಿಗೆ ಹೋಗುವ ವಾಹನಗಳಲ್ಲೂ 4-5 ಪಟ್ಟು ಹೆಚ್ಚಿನ ದರ ವಿಧಿಸಿದ್ದು, ಪ್ರಯಾಣಿಕರ ಪರದಾಟ ಹೇಳತೀರದಾಗಿದೆ. ಒಟ್ಟಾರೆ ಮುಷ್ಕರದಿಂದಾಗಿ ಪ್ರಯಾಣಿಕರು ಹೈರಾಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...